71.24 ಕೋಟಿ ಮೊಬೈಲ್ ನಂಬರ್'ಗಳು ಮತ್ತು 82 ಕೋಟಿ ಬ್ಯಾಂಕ್ ಖಾತೆಗಳು ಆಧಾರ್‌ನೊಂದಿಗೆ ಜೋಡಿಸಲ್ಪಟ್ಟಿವೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. 

ನವದೆಹಲಿ (ಡಿ.28): 71.24 ಕೋಟಿ ಮೊಬೈಲ್ ನಂಬರ್'ಗಳು ಮತ್ತು 82 ಕೋಟಿ ಬ್ಯಾಂಕ್ ಖಾತೆಗಳು ಆಧಾರ್‌ನೊಂದಿಗೆ ಜೋಡಿಸಲ್ಪಟ್ಟಿವೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ತಿದ್ದುಪಡಿ ಕಾಯ್ದೆ (2005) ಅಡಿಯಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಅನ್ನು ಜೋಡಿಸಲಾಗುತ್ತಿದೆ.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಮೊಬೈಲ್ ನಂಬರ್‌ಗೆ ಆಧಾರ್ ಜೋಡಣೆ ಮಾಡಲಾಗುತ್ತಿದೆ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಡಿ.8ರ ವರೆಗಿನ ಮಾಹಿತಿಯ ಪ್ರಕಾರ 71.24 ಕೋಟಿ ಮೊಬೈಲ್ ನಂಬರ್‌ಗಳು ಮತ್ತು 82 ಕೋಟಿ ಬ್ಯಾಂಕ್ ಖಾತೆಗಳು ಆಧಾರ್‌ನೊಂದಿಗೆ ಜೋಡಿಸಲ್ಪಟ್ಟಿವೆ.