ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗುರುವಾರ ಸುಮಾರು 27 ಲಕ್ಷ ನಿವೃತ್ತ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗುರುವಾರ ಸುಮಾರು 27 ಲಕ್ಷ ನಿವೃತ್ತ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಕೇಂದ್ರೀಯ ವಿಶ್ವವಿದ್ಯಾಲಯದ ಕಾಗೂ ಕಾಲೇಜುಗಳ ಎಲ್ಲಾ ನಿವೃತ್ತ ಬೋಧಕೇತರ ಸಿಬ್ಬಂದಿಗೆ 7ನೇ ವೇತನ ವೇತನ ಆಯೋಗದಲ್ಲಿ ನಿಗದಿ ಪಡಿಸಿದಂತೆಯೇ ಪಿಂಚಣಿಯನ್ನು ನೀಡಲಾಗುವುದು ಎಂದು ಹೇಳಿದೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ಪ್ರಕಾಶ್ ಜಾವ್ಡೆಕಾರ್ ಅವರು ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ.
ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ಬೋಧಕೇತರ ನಿವೃತ್ತ ನೌಕರರಿಗೆ 7ನೇ ವೇತನ ಆಯೋಗದಲ್ಲಿರುವಂತೆ ಪಿಂಚಣಿ ಮೊತ್ತವನ್ನು ಏರಿಕೆ ಮಾಡುವುದಾಗಿ ತಿಳಿಸಿದ್ದಾರೆ.
