ಭೀಕರ ಬಸ್ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 

ನವದೆಹಲಿ : ಭೀಕರ ಬಸ್ ಅಪಘಾತದಲ್ಲಿ 8 ಮಂದಿ ದುರ್ಮರಣವನ್ನಪ್ಪಿದ್ದಾರೆ.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Scroll to load tweet…

ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದು, ವೇಗವಾಗಿ ಬರುತ್ತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದು ಈ ಅವಘಡವಾಗಿದೆ. 

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಕಳೆದ ತಿಂಗಳೂ ಇದೇ ಸ್ಥಳದಲ್ಲಿ ಕಾರು ಹಾಗೂ ಆ್ಯಂಬುಲೆನ್ಸ್ ಅಪಘಾತ ಸಂಭವಿಸಿ 7 ಮಂದಿ ಮೃತಪಟ್ಟಿದ್ದರು.