ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ : ಭೀಕರ ಅಪಘಾತದಲ್ಲಿ 8 ಮಂದಿ ದುರ್ಮರಣ

8 Dead In Road Accident
Highlights

ಭಾನುವಾರ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಚಾಲಕನ ನಿಯಂತ್ರಣ ತಪ್ಪಿ  ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು ಸ್ಥಳದಲ್ಲೇ  8 ಮಂದಿ ದುರ್ಮರಣವನ್ನಪ್ಪಿದ್ದಾರೆ. 
 

ಕೋಲಾರ :   ಭಾನುವಾರ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಚಾಲಕನ ನಿಯಂತ್ರಣ ತಪ್ಪಿ  ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು ಸ್ಥಳದಲ್ಲೇ  8 ಮಂದಿ ದುರ್ಮರಣವನ್ನಪ್ಪಿದ್ದಾರೆ. 

 ಲಾರಿ ಚಾಲಕನ ನಿದ್ರಾ ಮಂಪರಿನಲ್ಲಿದ್ದುದರಿಂದ ಕಣಿವೆ ಅರಣ್ಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ್ದು,  ಆಂಧ್ರಪ್ರದೇಶ ದ ಚಿತ್ತೂರು ಜಿಲ್ಲೆಯ ಕುಪ್ಪಂ ಮಂಡಲಂ ನಾಯನೂರು ಅರಣ್ಯ ಪ್ರದೇಶದಲ್ಲಿ ಅವಘಡ ಸಂಭವಿಸಿದೆ. 

ಮಾವಿನಕಾಯಿ ತುಂಬಿ ಕೊಂಡು, ತಮಿಳುನಾಡು ಕಡೆ ಹೋಗುತ್ತಿದ್ದ ಲಾರಿಯಲ್ಲಿ ಚಾಲಕ, ಕ್ಲಿನರ್, ಕೂಲಿಗಾರರು ಸೇರಿ ಎಂಟು ಜನರಿದ್ದು, 8ಮಂದಿಯೂ  ಧಾರುಣವಾಗಿ ಸಾವನ್ನಪ್ಪಿದ್ದಾರೆ. 

ಮೃತರ ಆರು ಜನರ ಗುರುತು ಪತ್ತೆ ಯಾಗಿದ್ದು,  ಘಟನಾ ಸ್ಥಳಕ್ಕೆ ಕುಪ್ಪಂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

loader