ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜೀನಾಮೆ ನೀಡುತ್ತಾರಾ ಎನ್ನುವ ಪ್ರಶ್ನೆ ಇದೀಗ ಎದ್ದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು 83 ಮಾಜಿ ಆಡಳಿತ ಸೇವಾ ಅಧಿಕಾರಿಗಳು ರಾಜೀನಾಮೆಗೆ ಆಗ್ರಹಿಸಿ ಬಹಿರಂಗ ಪತ್ರ ಬರೆದಿದ್ದಾರೆ. 

ಮೀರತ್ : ಬುಲಂದ್ ಶೇರ್ ನಲ್ಲಿ ಕಳೆದ ಡಿಸೆಂಬರ್ 3 ರಂದು ನಡೆದ ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಆಗ್ರಹ ಕೇಳಿ ಬಂದಿದೆ. 

83 ಮಾಜಿ ಐಎಎಸ್, ಐಪಿಎಸ್, ಐಎಫ್ ಎಸ್ ಅಧಿಕಾರಿಗಳು ಬಹಿರಂಗವಾಗಿ ಪತ್ರ ಬರೆಯುವ ಮೂಲಕ ರಾಜೀನಾಮೆಗೆ ಒತ್ತಾಯಿಸಿದ್ದಾರೆ. 

ಕಾನೂನು ನಿಯಮಗಳನ್ನು ಸೂಕ್ತ ರೀತಿಯಲ್ಲಿ ಜಾರಿಗೊಳಿಸುವಲ್ಲಿ ಅಧಿಕಾರ ವಹಿಸಿಕೊಂಡಂದಿನಿಂದಲೂ ವಿಫಲರಾಗಿದ್ದಾರೆ. ಈ ನಿಟ್ಟಿನಲ್ಲಿ ಈ ರೀತಿಯ ಘಟನೆಗಳಾಗುತ್ತಿವೆ. ಸಾರ್ವಜನಿಕ ಅಭಿಪ್ರಾಯವನ್ನು ಸಂಗ್ರಹಿಸಿ ಪತ್ರ ಬರೆದಿದ್ದಾಗಿ ಹೇಳಿದ್ದಾರೆ. 

ಮಾಜಿ ವಿದೇಶಾಂಗ ಕಾರ್ಯದರ್ಶಿ ಶ್ಯಾಮ್ ಸರನ್, ಎನ್.ಸಿ. ಸಕ್ಸೇನಾ ಸೇರಿದಂತೆ ಹಲವು ಅಧಿಕಾರಿಗಳು ಸೇರಿ ಪತ್ರ ಬರೆದಿದ್ದಾರೆ. 

'ಓವೈಸಿಗೆ ತೆಲಂಗಾಣದಿಂದ ಗೇಟ್ ಪಾಸ್'

ಡಿಸೆಂಬರ್ 3 ರಂದು ಕಸಾಯಿಖಾನೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗುಂಪನ್ನು ನಿಯಂತ್ರಿಸಲು ಮುಂದಾದ ವೇಳೆ ಪೊಲೀಸ್​ ಅಧಿಕಾರಿ ಗುಂಪಿನ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.

ಕಸಾಯಿಖಾನೆ ವಿರುದ್ಧ ಪ್ರತಿಭಟನಾಕಾರರ ದಾಳಿಗೆ ಪೊಲೀಸ್​ ಅಧಿಕಾರಿ ಬಲಿ

ಉತ್ತರ ಪ್ರದೇಶದ ಬುಲಂದ್​ಶಹರ್​ನಲ್ಲಿದ್ದ ಅಕ್ರಮ ಕಸಾಯಿಖಾನೆ ವಿರುದ್ಧ ಸ್ಥಳೀಯ ಗುಂಪು ಪ್ರತಿಭಟನೆ ನಡೆಸುತ್ತಿತ್ತು. ಆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಪೊಲೀಸರು ಗಲಭೆ ನಿಯಂತ್ರಿಸಲು ಮುಂದಾಗಿದ್ದರು. ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲುಗಳಿಂದ ದಾಳಿ ಮಾಡಿದ್ದರು. ಈ ವೇಳೆ ನಾಗರೋರ್ವರೂ ಮೃತಪಟ್ಟಿದ್ದರು.