ದಾಳಿಯನ್ನು ಖಂಡಿಸಿರುವ ಕೇಂದ್ರ ಗೃಹಮಂತ್ರಿ ರಾಜನಾಥ್ ಸಿಂಗ್, ಹುತಾತ್ಮ ಯೋಧರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುಕ್ಮಾ, ಛತ್ತೀಸ್’ಗಢ (ಮಾ.11): ಛತ್ತೀಸ್’ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳು ಸಿಆರ್’ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 11 ಮಂದಿ ಜವಾನರು ಹುತಾತ್ಮರಾಗಿದ್ದಾರೆಂದು ತಿಳಿದು ಬಂದಿದೆ.
ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಮಂತ್ರಿ ರಾಜನಾಥ್ ಸಿಂಗ್, ಹುತಾತ್ಮ ಯೋಧರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಛತ್ತೀಸ್’ಗಢ ಮುಖ್ಯಮಂತ್ರಿಯೊಂದಿಗೆ ಸಂಪರ್ಕದಲ್ಲಿದ್ದು, ಗಾಯಗೊಂಡಿರುವ ಯೋಧರ ಚಿಕಿತ್ಸೆ ನಡೆಸಲಾಗುತ್ತಿದೆ ಎಂದಿದ್ದಾರೆ.
(ಸಾಂದರ್ಭಿಕ ಚಿತ್ರ)
