ಡಿ.25 ರಂದು ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅಂದು 93 ಮಂದಿ ಕೈದಿಗಳನ್ನು ಬಿಡುಗಡೆ ಮಾಡಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.

ಲಕ್ನೋ (ಡಿ.22): ಡಿ.25 ರಂದು ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅಂದು 93 ಮಂದಿ ಕೈದಿಗಳನ್ನು ಬಿಡುಗಡೆ ಮಾಡಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಶಿಕ್ಷಾ ಅವಧಿಯನ್ನು ಪೂರೈಸಿರುವ ಉತ್ತರ ಪ್ರದೇಶದ ಬೇರೆ ಬೇರೆ ಜೈಲಿನಲ್ಲಿರುವ ಕೈದಿಗಳನ್ನು ಬಿಡುಗಡೆ ಮಾಡಲು ಯೋಗಿ ಸರ್ಕಾರ ನಿರ್ಧರಿಸಿದೆ. ಅವರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಕೈದಿಗಳ ಶಿಕ್ಷಾವಧಿ ಈಗಾಗಲೇ ಪೂರ್ಣಗೊಂಡಿದ್ದು ಅವರಿಗೆ ವಿಧಿಸಿರುವ ದಂಡವನ್ನು ಪಾವತಿಸದೇ ಇದ್ದುದರಿಂದ ಇನ್ನೂ ಬಿಡುಗಡೆ ಸಿಕ್ಕಿಲ್ಲ. ವಾಜಪೇಯಿ ಹುಟ್ಟು ಹಬ್ಬದ ದಿನ ಬಿಡುಗಡೆ ಭಾಗ್ಯ ಸಿಗಲಿದೆ