1.5 ಲಕ್ಷಕ್ಕಿಂತ ಹೆಚ್ಚು ಮತದಾರರು ಇರುವ ಕ್ಷೇತ್ರವನ್ನು ಕೇವಲ 20,000 ಮಾದರಿಗಳನ್ನು ಇಟ್ಟುಕೊಂಡು ಯಾರು ಗೆಲ್ಲಲಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಸಮೀಕ್ಷೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.

ನವದೆಹಲಿ(ಮಾ.10): ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸಮಬಲದ ಸಾಧಿಸಲಿವೆ ಎಂಬ ಚುನಾವಣೋತ್ತರ ಸಮೀಕ್ಷೆಯ ಭವಿಷ್ಯವನ್ನು ಕ್ರಿಕೆಟಿಗ ಹಾಗೂ ಕಾಂಗ್ರೆಸ್ಸಿಗ ನವಜೋತ್ ಸಿಂಗ್ ಸಿಧು ಅಲ್ಲಗಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಮ್ ಆದ್ಮಿ ಪಕ್ಷ ಕಾಂಗ್ರೆಸ್‌'ಗೆ ಪೈಪೋಟಿ ನೀಡಿದರೂ 40ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ. ಬಿಜೆಪಿ ಮತ್ತು ಅಕಾಲಿದಳಕ್ಕೆ 10 ಸ್ಥಾನ ದೊರೆತರೆ ಅದೇ ಜಾಸ್ತಿ. ಉಳಿದ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

1.5 ಲಕ್ಷಕ್ಕಿಂತ ಹೆಚ್ಚು ಮತದಾರರು ಇರುವ ಕ್ಷೇತ್ರವನ್ನು ಕೇವಲ 20,000 ಮಾದರಿಗಳನ್ನು ಇಟ್ಟುಕೊಂಡು ಯಾರು ಗೆಲ್ಲಲಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಸಮೀಕ್ಷೆಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.