ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ಗುದ್ದಿ, ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ (ನ.13): ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ಗುದ್ದಿ, ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿವಮೊಗ್ಗ ತಾಲೂಕಿನ ಆಯನೂರು ಕೋಟೆ ಗ್ರಾಮದಲ್ಲಿ, ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ಹೋರಿ ಬೆದರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಬಾಳೆಕೊಪ್ಪ ಗ್ರಾಮದ ಚಂದ್ರಶೇಖರ್​'ಗೆ ಹೋರಿ ಗುದ್ದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಈತ ಸಾವನ್ನಪ್ಪಿದ್ದಾನೆ. ಮತ್ತೋರ್ವ ಯುವಕನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಘಡ ನಡೆಯುತ್ತಿದ್ದಂತೆ ಸ್ಪರ್ಧೆ ಸ್ಥಗಿತಗೊಳಿಸಿರುವ ಪೊಲೀಸರು, ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

(ಸಾಂದರ್ಭಿಕ ಚಿತ್ರ)