ಸಾವಿನಲ್ಲೂ ಗಂಂಡ-ಹೆಂಡತಿ ಒಂದಾಗಿದ್ದಾರೆ. ಆಂಬುಲೆನ್ಸ್​ನಲ್ಲಿ ಮೃತಪಟ್ಟ ಪತಿಯ ಶವವನ್ನು ಮನೆಗೆ ಸಾಗಿಸುತ್ತಿದ್ದ ವೇಳೆ ಅಪಘಾತದಲ್ಲಿ ಪತ್ನಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಬಳಿ ನಡೆದಿದೆ.

ರಾಯಚೂರು, [ಸೆ.24]: ಸಾವಿನಲ್ಲೂ ಗಂಂಡ-ಹೆಂಡತಿ ಒಂದಾಗಿದ್ದಾರೆ. ಆಂಬುಲೆನ್ಸ್​ನಲ್ಲಿ ಮೃತಪಟ್ಟ ಪತಿಯ ಶವವನ್ನು ಮನೆಗೆ ಸಾಗಿಸುತ್ತಿದ್ದ ವೇಳೆ ಅಪಘಾತದಲ್ಲಿ ಪತ್ನಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಬಳಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಂಗಪ್ಪ ಎಂಬುವರು ಅನಾರೋಗ್ಯದಿಂದ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಆಸ್ಪತ್ರೆಯಲ್ಲೇ ಮೃತಪಟ್ಟ ಅವರ ಶವವನ್ನು ಆಂಬುಲೆನ್ಸ್​ನಲ್ಲಿ ಸ್ವಗ್ರಾಮ ಸುರಪುರಕ್ಕೆ ತೆಗೆದುಕೊಂಡು ಬರಲಾಗುತ್ತಿತ್ತು. ಈ ವೇಳೆ ಮಸ್ಕಿ ಬಳಿ ಆಂಬುಲೆನ್ಸ್​ಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಗಂಗಪ್ಪ ಪತ್ನಿ ಶ್ರೀದೇವಿ (30) ಸೇರಿ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಸ್ಕಿ ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯದಲ್ಲಿ ಶ್ರೀದೇವಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.