2012ರಲ್ಲಿ ಪಟನಾ ಕಾಲೇಜು 150ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಆಚರಿಸಿಕೊಂಡಿತ್ತು. ಈ ವೇಳೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಎದುರೇ ಘೋಷಣೆ ಕೂಗಿ ದಾಂಧಲೆ ಮಾಡಿದ್ದರು.
ಪಟನಾ(ಅ.13): ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಟನಾ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಆಧಾರ್ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ವಿವಿಯ ವೆಬ್'ಸೈಟ್'ನಲ್ಲಿ ಲಭ್ಯವಿರುವ ಫಾರ್ಮ್ ಭರ್ತಿ ಮಾಡಬೇಕಾಗಿದ್ದು, ಅದರಲ್ಲಿ ಆಧಾರ್ ಕಾರ್ಡ್ ಸ್ಕ್ಯಾನ್ ಮಾಡಿ ಅಪ್'ಲೋಡ್ ಮಾಡುವಂತೆ ಸೂಚಿಸಲಾಗಿದೆ. ಜಿಲ್ಲಾಡಳಿತದ ಸೂಚನೆಯಂತೆ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದೆ.
2012ರಲ್ಲಿ ಪಟನಾ ಕಾಲೇಜು 150ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಆಚರಿಸಿಕೊಂಡಿತ್ತು. ಈ ವೇಳೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಎದುರೇ ಘೋಷಣೆ ಕೂಗಿ ದಾಂಧಲೆ ಮಾಡಿದ್ದರು.