ನೀಟ್ ಪರೀಕ್ಷೆಗೆ ಆಧಾರ್ ಕಡ್ಡಾಯವಲ್ಲ; ಸುಪ್ರೀಂಗೆ ಕೇಂದ್ರ ಸ್ಪಷ್ಟನೆ

First Published 7, Mar 2018, 6:52 PM IST
Aadhaar not mandatory to appear for NEET
Highlights

ಗುಜರಾತ್ ನಿವಾಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ, ವಿಚಾರಣೆ ನಡೆಸುವ ವೇಳೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪ್ರಸಕ್ತ ವರ್ಷ ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಧಾರ್ ನಂಬರ್ ನಮೂದನೆ ನೀಡುವುದು ಕಡ್ಡಾಯ ಎಂದು ಈ ತಿಂಗಳ ಆರಂಭದಲ್ಲಿ ಸಿಬಿಎಸ್ಇಯು ಸೂಚಿಸಿತ್ತು.

ನವದೆಹಲಿ(ಮಾ.07): ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಗೆ ಅರ್ಜಿ ಸಲ್ಲಿಸಲು ಆಧಾರ್ ಸಂಖ್ಯೆ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್'ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಸರ್ಕಾರವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ನೀಟ್ ಅಭ್ಯರ್ಥಿಗಳಿಗೆ ಆಧಾರ್ ಅನ್ನು ಕಡ್ಡಾಯಗೊಳಿಸಲು ಸಿಬಿಎಸ್ಇ ಗೆ ತಾನು ಯಾವುದೇ ಸೂಚನೆ ನೀಡಿಲ್ಲವೆಂದು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ಗುಜರಾತ್ ನಿವಾಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ, ವಿಚಾರಣೆ ನಡೆಸುವ ವೇಳೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪ್ರಸಕ್ತ ವರ್ಷ ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಧಾರ್ ನಂಬರ್ ನಮೂದನೆ ನೀಡುವುದು ಕಡ್ಡಾಯ ಎಂದು ಈ ತಿಂಗಳ ಆರಂಭದಲ್ಲಿ ಸಿಬಿಎಸ್ಇಯು ಸೂಚಿಸಿತ್ತು.

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮೊಬೈಲ್ ನಂಬರ್, ಬ್ಯಾಂಕ್ ಅಕೌಂಟ್'ಗಳೊಂದಿಗೆ ಆಧಾರ್ ನಂಬರ್ ಜೋಡನೆಗೆ ಮಾರ್ಚ್ 31 ಡೆಡ್ ಲೈನ್ ನೀಡಿರುವ ಬಗ್ಗೆ ಸರಿಯಾದ ನಿರ್ಧಾರ ಕೈಗೊಳ್ಳಬೇಕೆಂದು ಸೂಚಿಸಿದೆ.

loader