ಆಧಾರ್ ಲಿಂಕ್ : ಯಾವ ದಾಖಲೆಗಳಿಗೆ ಗುಡವು ವಿಸ್ತರಣೆ..?

Aadhaar-PAN Linking Deadline Extended To March 31 Next Year
Highlights

ಕೆಲ ದಾಖಲೆಗಳೊಂದಿಗೆ ಆಧಾರ್ ಲಿಂಕ್ ಮಾಡಲು ಇದೀಗ ಗಡುವು ವಿಸ್ತರಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ ನಲ್ಲಿ ಆಧಾರ್ ಲಿಂಕ್ ವಿಚಾರವಾಗಿ ವಿಚಾರಣೆ ನಡೆಯುತ್ತಿದ್ದು ಮುಂದಿನ 2019 ರ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ.

ನವದೆಹಲಿ: ಪಾನ್‌ ಸಂಖ್ಯೆಯನ್ನು ಆಧಾರ್‌ನೊಂದಿಗೆ ಜೋಡಿಸುವ ಗಡುವನ್ನು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಮುಂದಿನ ವರ್ಷ ಮಾಚ್‌ರ್‍ 31ರವರೆಗೆ ವಿಸ್ತರಿಸಿದೆ. ಜುಲೈ 30ಕ್ಕೇ ಈ ಗಡುವು ಅಂತ್ಯವಾಗಿತ್ತು. ಆದರೆ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಇದನ್ನು ವಿಸ್ತರಿಸಲಾಗಿದೆ.

ಈ ಹಿಂದೆಯೂ ಕೂಡ ಅನೇಕ ಬಾರಿ ಪಾನ್ - ಆಧಾರ್ ಲಿಂಕ್ ಮಾಡಲು ಗಡುವು ವಿಸ್ತರಣೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ವಿಸ್ತರಣೆ ಮಾಡಲಾಗಿದೆ. 

ಅಲ್ಲದೇ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಮಾಡುವ ಬಗ್ಗೆ ಇನ್ನೂ ಕೂಡ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಸ್ಪಷ್ಟ ನಿರ್ಧಾರ ಹೊರ ಬಿದ್ದಿಲ್ಲ.

loader