ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿಗಳಿಗೆ ಆಧಾರ್ ಪಡೆಯಲು ಡಿ.31ರ ವರೆಗೆ ಮೂರು ತಿಂಗಳು ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನಷ್ಟೇ ಆಧಾರ್ ಪಡೆಯಬೇಕಾದವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
ನವದೆಹಲಿ: ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿಗಳಿಗೆ ಆಧಾರ್ ಪಡೆಯಲು ಡಿ.31ರ ವರೆಗೆ ಮೂರು ತಿಂಗಳು ಅವಧಿ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಇನ್ನಷ್ಟೇ ಆಧಾರ್ ಪಡೆಯಬೇಕಾದವರಿಗೆ ಈ ನಿಯಮ ಅನ್ವಯವಾಗುತ್ತದೆ ಎಂದು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
ಬಡ ಮಹಿಳೆಯರಿಗೆ ಉಚಿತ ಅಡುಗೆ ಅನಿಲ, ಸೀಮೆಣ್ಣೆ ಮತ್ತು ರಸಗೊಬ್ಬರ ಸಬ್ಸಿಡಿ, ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆ ಮತ್ತು ಎಂಜಿಎನ್‌ಆರ್‌ಇಜಿಎ ಸೇರಿದಂತೆ 35 ಸಚಿವಾಲಯಗಳ 135 ಯೋಜನೆಗಳಿಗೆ ಈ ನಿಯಮ ಅನ್ವಯವಾಗುತ್ತದೆ.
ಆಧಾರ್ ಇಲ್ಲದವರು ಸೆ.30ರೊಳಗೆ ಪಡೆಯುವಂತೆ ಸರ್ಕಾರ ಸೂಚಿಸಿತ್ತು.
