ಖ್ಯಾತ ನಟ ಕಮಲ್ ಹಾಸನ್ ರಾಜಕೀಯದಲ್ಲಿ ಸದಾ ಸುದ್ದಿಯಾಗುತ್ತಲೇ ಇದ್ದಾರೆ. ಇದೇ ರೀತಿಯಾಗಿ ಇಂದು ಚೆನ್ನೈನಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರನ್ನ ಭೇಟಿಯಾಗಲಿದ್ದಾರೆ.

ಚೆನ್ನೈ(ಸೆ.21): ಖ್ಯಾತ ನಟ ಕಮಲ್ ಹಾಸನ್ ರಾಜಕೀಯದಲ್ಲಿ ಸದಾ ಸುದ್ದಿಯಾಗುತ್ತಲೇ ಇದ್ದಾರೆ. ಇದೇ ರೀತಿಯಾಗಿ ಇಂದು ಚೆನ್ನೈನಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರನ್ನ ಭೇಟಿಯಾಗಲಿದ್ದಾರೆ.

ಈಗಾಗಲೇ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಸುಳಿವು ಕೊಟ್ಟಿರುವ ಕಮಲ್ ಹಾಸನ್, ಇತ್ತೀಚೆಗಷ್ಟೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನ ಭೇಟಿಯಾಗಿ, ರಾಜಕೀಯ ಕುರಿತು ಸಲಹೆ ಪಡೆದಿದ್ದರು. ರಾಜಕೀಯದ ಬಗ್ಗೆ ಸಾಕಷ್ಟು ಒಲವು ಹೊಂದಿರುವ ನಟ ಕಮಲ್ ಹಾಸನ್, ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಸಾಕಷ್ಟು ಬಾರಿ ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಅರವಿಂದ್ ಕೇಜ್ರೀವಾಲ್ ಅವರನ್ನ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಮೂಲಕ ಕಮಲ್ ಹೊಸ ಪಕ್ಷ ಸ್ಥಾಪಿಸುತ್ತಾರೋ ಅಥವಾ ಕೇಜ್ರೀವಾಲ್ ಅವರ ಆಮ್ ಆದ್ಮಿ ಪಾರ್ಟಿ ಸೇರುತ್ತಾರೋ ಎಂಬ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟು ಹಾಕಿದೆ.