ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅಲ್ಲಿನ ಉಪರಾಜ್ಯಪಾಲರ ಮನೆಯಲ್ಲಿ ಪ್ರತಿಭಟನೆ ನಿರತರಾಗಿರುವ ನಡುವೆ, ಭಾನುವಾರ ಆಪ್‌ ಕಾರ್ಯಕರ್ತರು ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. 

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅಲ್ಲಿನ ಉಪರಾಜ್ಯಪಾಲರ ಮನೆಯಲ್ಲಿ ಪ್ರತಿಭಟನೆ ನಿರತರಾಗಿರುವ ನಡುವೆ, ಭಾನುವಾರ ಆಪ್‌ ಕಾರ್ಯಕರ್ತರು ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

Add Asianetnews Kannada as a Preferred SourcegooglePreferred

ಐಎಎಸ್‌ ಅಧಿಕಾರಿಗಳು ತಮ್ಮ ಪ್ರತಿಭಟನೆ ನಿಲ್ಲಿಸಲು ನಿರ್ದೇಶಿಸುವಂತೆ ಒತ್ತಾಯಿಸಿ, ಉಪರಾಜ್ಯಪಾಲ ಅನಿಲ್‌ ಬೈಜಾಲ್‌ ನಿವಾಸದಲ್ಲಿ ಸಿಎಂ ಕೇಜ್ರಿವಾಲ್‌ ನೇತೃತ್ವದಲ್ಲಿ ಆರು ದಿನಗಳಿಂದ ಧರಣಿ ನಡೆಯುತ್ತಿದೆ.

ಈ ನಡುವೆ, ಭಾನುವಾರ ಆಪ್‌ ಕಾರ್ಯಕರ್ತರು ಕೇಜ್ರಿವಾಲ್‌ ಬೆಂಬಲಕ್ಕೆ ನಿಂತು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಸಿಪಿಎಂ ನಾಯಕರು ಕೂಡಾ ಭಾಗವಹಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.