ಪ್ರಧಾನಿ ನಿವಾಸ ಮುತ್ತಿಗೆ ಹಾಕಲೆತ್ನಿಸಿದ ಆಪ್ ಕಾರ್ಯಕರ್ತರ ಬಂಧನತಾರಕಕ್ಕೇರಿದ ದೆಹಲಿ ಲೆಫ್ಟಿನೆಂಟ್ ಗವರ್ನರ್ ಜೊತೆಗಿನ ಬಿಕ್ಕಟ್ಟುಸಂಸತ್ ರಸ್ತೆಯಲ್ಲೇ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರುಆಪ್ ಪ್ರತಿಭಟನೆಗೆ ಸಿಪಿಎಂ ಬೆಂಬಲ

ನವದೆಹಲಿ(ಜೂ.17): ದೆಹಲಿ ಲೆಫ್ಟಿನೆಂಟ್ ಗವರ್ನರ್ ಹಾಗೂ ಆಪ್ ಸರ್ಕಾರದ ನಡುವಿನ ಬಿಕ್ಕಟ್ಟು ತಾರಕಕೇರಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಸಂಸತ್ ರಸ್ತೆಯಲ್ಲೇ ವಶಕ್ಕೆ ಪಡೆದಿದ್ದಾರೆ. 

ಕಳೆದ ಆರು ದಿನಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಧರಣಿ ನಡೆಸುತ್ತಿದ್ದು, ತಮ್ಮ ನಾಯಕನ ಪ್ರತಿಭಟನೆ ಬೆಂಬಲಿಸಿ ಆಪ್ ಕಾರ್ಯಕರ್ತರು ಇಂದು ಸಂಜೆ ಮಂಡಿ ಹೌಸ್ ನಿಂದ ಪ್ರಧಾನಿ ನಿವಾಸದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದರು. 

Scroll to load tweet…

ಪ್ರಧಾನಿ ನಿವಾಸಕ್ಕೆ ತೆರಳಲು ಯತ್ನಿಸಿದ ಆಪ್ ಕಾರ್ಯಕರ್ತರನ್ನು ಸಂಸತ್ ರಸ್ತೆಯಲ್ಲೇ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆಪ್ ಪ್ರತಿಭಟನೆಯಲ್ಲಿ ಸಿಪಿಎಂ ಕೂಡ ಭಾಗವಹಿಸಿ ಬೆಂಬಲ ನೀಡಿತು. ಮುಷ್ಕರ ಕೈಬಿಡುವಂತೆ ಐಎಎಸ್ ಅಧಿಕಾರಿಗಳು ಸೂಚಿಸಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಒತ್ತಾಯಿಸಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಅಧಿಕಾರಿಗಳು ನಾಲ್ಕು ತಿಂಗಳಿಂದ ಪ್ರತಿಭಟನೆಯಲ್ಲಿ ತೊಡಗಿರುವುದರಿಂದ ಸಭೆಗಳಿಗೆ ಹಾಜರಾಗುತ್ತಿಲ್ಲ. ಹಾಗಾಗಿ ಸರ್ಕಾರದ ಕೆಲಸಗಳು ಸ್ಥಗಿತಗೊಂಡಿವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆದರೆ ಐಎಎಸ್ ಅಧಿಕಾರಿಗಳು ಯಾವುದೇ ಮುಷ್ಕರ ನಡೆಸುತ್ತಿಲ್ಲ ಎಂದು ಐಎಎಸ್ ಅಧಿಕಾರಿ ಮನೀಷಾ ಸಕ್ಸೇನಾ ಹೇಳಿದ್ದಾರೆ.