ಪುತ್ರಿ ಆರುಷಿ ತಲ್ವಾರ್ ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಆಕೆಯ ಪೋಷಕರಾದ ದಂತ ವೈದ್ಯ ದಂಪತಿ ಡಾ| ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಅವರು ಸೋಮವಾರ ದಾಸ್ನಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ದಾಸ್ನಾ (ಉ.ಪ್ರ.): ಪುತ್ರಿ ಆರುಷಿ ತಲ್ವಾರ್ ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಆಕೆಯ ಪೋಷಕರಾದ ದಂತ ವೈದ್ಯ ದಂಪತಿ ಡಾ| ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಅವರು ಸೋಮವಾರ ದಾಸ್ನಾ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಹೈಕೋರ್ಟ್ ಆದೇಶ ಪ್ರತಿ ತಲುಪಿ ಕೆಲವು ಪ್ರಕ್ರಿಯೆಗಳು ನಡೆಯಬೇಕಿದ್ದ ಕಾರಣ ಬಿಡುಗಡೆ ವಿಳಂಬ ವಾಗಿತ್ತು. ಆದರೆ ಬಿಡುಗಡೆ ಆದರೂ ಕೂಡ ಜೈಲಿನಲ್ಲಿರುವ ದಂತವೈದ್ಯ ವಿಭಾಗಕ್ಕೆ ಪ್ರತಿ 15 ದಿನಕ್ಕೊಮ್ಮೆ ಭೇಟಿ ನೀಡಿ ಕೈದಿಗಳಿಗೆ ದಂತ ಚಿಕಿತ್ಸೆ ನೀಡಲು ದಂಪತಿ ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
