ನೋಟಿಫಿಕೇಷನ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆಯಲಾಗಿದೆ ಎಂಬ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಆರೋಪವನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಳ್ಳಿಹಾಕಿದೆ. ಬಸವರಾಜೇಂದ್ರ ಆರೋಪವನ್ನು ತಳ್ಳಿಹಾಕಿದ ಎಸಿಬಿ ಡಿಜಿಪಿ ಎಂ.ಎನ್​ ರೆಡ್ಡಿ, ಯಾರ ಒತ್ತಡವೂ ಇಲ್ಲದೇ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಡಿನೋಟಿಫಿಕೇಷನ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆಯಲಾಗಿದೆ ಎಂಬ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಆರೋಪವನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಳ್ಳಿಹಾಕಿದೆ.

ಬಸವರಾಜೇಂದ್ರ ಆರೋಪವನ್ನು ತಳ್ಳಿಹಾಕಿದ ಎಸಿಬಿ ಡಿಜಿಪಿ ಎಂ.ಎನ್​ ರೆಡ್ಡಿ, ಯಾರ ಒತ್ತಡವೂ ಇಲ್ಲದೇ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಯಾವುದೇ ಆರೋಪಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಅವಕಾಶ ಇಲ್ಲ, ಒತ್ತಾಯ ಮಾಡಿದರೆ ಮೇಲಧಿಕಾರಿಗಳಿಗೆ ದೂರು ನೀಡಲು ಅವಕಾಶವಿತ್ತು, ಈಗಲೂ ಎಸಿಬಿ ಮೇಲಧಿಕಾರಿಗಳಿಗೆ ದೂರು ಸಲ್ಲಿಸಿದ್ರೆ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ರೀತಿ ಹೇಳಿಕೆ ನೀಡುತ್ತಿರುವುದು ಆರೋಪದಿಂದ ನುಣುಚಿಕೊಳ್ಳುವ ಪ್ರಯತ್ನವಾಗಿದೆ ಎಂದು ಅವರು ಹೇಳಿದ್ದಾರೆ.

ಡಿನೋಟಿಫಿಕೇಷನ್​​ ಸಂಬಂಧ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆದು ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್​ ದಾಖಲಿಸಿದೆ. ಒತ್ತಡಕ್ಕೆ ಮಣಿಯದ ಅಧಿಕಾರಿಯನ್ನ 2ನೇ ಆರೋಪಿಯಾಗಿಸಿ ಎಫ್​ಐಆರ್​ ದಾಖಲಿಸಿದೆ, ಎಂದು ಕೆಎಎಸ್​ ಅಧಿಕಾರಿ ಬಸವರಾಜೇಂದ್ರ ಎಸಿಬಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದು, ರಾಜ್ಯಪಾಲರಿಗೆ, ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ.