ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆ.13(1)(C), 13(1) (D), 13(2) ಐಪಿಸಿ 420, 120(ಬಿ)ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಗರ್ ಹುಕುಂ ಭೂ ಸಕ್ರಮಿಕರಣ ಸಮಿತಿ ಅಧ್ಯಕ್ಷರಾಗಿದ್ದ ಆರ್. ಅಶೋಕ್ ಅಕ್ರಮ ಭೂ ಹಂಚಿಕೆ ವಿಚಾರವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರು(ಜ.09): ಬಗರ್ ಹುಕುಂ ಸಾಗುವಳಿ ಸಮಿತಿಯಿಂದ ಅಕ್ರಮ ಭೂಮಿ ಹಂಚಿಕೆ ಆರೋಪದಡಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ವಿರುದ್ಧ ಎಸಿಬಿ ಅಧಿಕಾರಿಗಳು ಪ್ರಾಥಮಿಕ ತನಿಖಾ ವರದಿ (ಎಫ್'ಐಆರ್) ದಾಖಲಿಸಲಾಗಿದ್ದು, ಅವರನ್ನು ಬಂಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆ.13(1)(C), 13(1) (D), 13(2) ಐಪಿಸಿ 420, 120(ಬಿ)ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಗರ್ ಹುಕುಂ ಭೂ ಸಕ್ರಮಿಕರಣ ಸಮಿತಿ ಅಧ್ಯಕ್ಷರಾಗಿದ್ದ ಆರ್. ಅಶೋಕ್ ಅಕ್ರಮ ಭೂ ಹಂಚಿಕೆ ವಿಚಾರವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈಗಾಗಲೇ ತಹಶೀಲ್ದಾರ್ ರಾಮಚಂದ್ರಯ್ಯ ಸೇರಿದಂತೆ ಕಂದಾಯ ಅಧಿಕಾರಿ ಗವೀಗೌಡ, ಚೌಡೇಗೌಡ ಹಾಗೂ ಅಂದಿನ ಗ್ರಾಮಲೆಕ್ಕಿಗಾಧಿಕಾರಿ ಶಶಿಧ ವಿರುದ್ಧವೂ ಆರೋಪ ಕೇಳಿಬಂದಿತ್ತು. ಈಗಾಗಲೇ ಅವರನ್ನು ಎಸಿಬಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಮಾಜಿ ಡಿಸಿಎಂ ಅಶೋಕ್ ಅವರನ್ನು ಬಂಧಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.