ಇನ್ನೊಂದು ಕಡೆ ಜಾರಿ ನಿರ್ದೇಶನಾಲಯ ವಶದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಿಗಮದ ಅಧಿಕಾರಿ ಜಯಚಂದ್ರ ಮನೆ ಮೇಲೂ ದಾಳಿ ನಡೆಸಲಾಗಿದೆ. ಚಂದ್ರಾ ಲೇಔಟ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು (ಡಿ.08): ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಕಾವೇರಿ ನೀರಾವರಿ ನಿಗಮದ ಅಧಿಕಾರಿ ಚಿಕ್ಕರಾಯಪ್ಪ ಮನೆ ಮೇಲೆ ದಾಳಿ ನಡೆಸಲಾಗಿದೆ. ಜೊತೆಗೆ ಬೆಂಗಳೂರು ಹಾಗೂ ಕೋಲಾರದಲ್ಲಿರುವ ಅವರ ಸಂಬಂಧಿಗಳ ಮನೆ ಮೇಲೂ ದಾಳಿ ನಡೆಸಲಾಗಿದೆ.
ಚಿಕ್ಕರಾಯಪ್ಪನ ನಾದಿನಿ ಗಂಡ ಆನಂದಮೂರ್ತಿ ಮನೆಯಲ್ಲಿದ್ದ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ.
ನವೆಂಬರ್ 30ರಂದು ಐಟಿ ದಾಳಿ ವೇಳೆ 152 ಕೋಟಿ ಮೌಲ್ಯದ ಆಸ್ತಿ, ಕೋಟ್ಯಂತರ ರೂ. ನಗದು, ಚಿನ್ನಾಭರಣ, ಚಿನ್ನದ ಗಟ್ಟಿ ಪತ್ತೆಯಾಗಿತ್ತು.
ಇನ್ನೊಂದು ಕಡೆ ಜಾರಿ ನಿರ್ದೇಶನಾಲಯ ವಶದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಿಗಮದ ಅಧಿಕಾರಿ ಜಯಚಂದ್ರ ಮನೆ ಮೇಲೂ ದಾಳಿ ನಡೆಸಲಾಗಿದೆ. ಚಂದ್ರಾ ಲೇಔಟ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಆದರೆ ಆದಾಯ ತೆರಿಗೆ, ಸಿಬಿಐ, ಜಾರಿ ನಿರ್ದೇಶನಾಲಯದ ತನಿಖೆ ಮುಗಿದ ಮೇಲೆ ಎಸಿಬಿ ದಾಳಿಗೆ ಮುಂದಾಗಿದ್ದು ಅಚ್ಚರಿ ಮೂಡಿಸಿದೆ. ಎಲ್ಲ ತನಿಖೆ, ವಿಚಾರಣೆ, ದಾಳಿ ಮುಗಿದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಎಚ್ಚೆತ್ತುಕೊಂಡಿದೆ.