ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜ್ ಪಕ್ಷವು ಸಂಪೂರ್ಣವಾಗಿ ನೆಲಕಚ್ಚಿದ ಬಳಿಕ ಉತ್ತರ ಪ್ರದೇಶದಲ್ಲಿ ಅಚ್ಚೇ ದಿನ್ ಬರಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನವದೆಹಲಿ (ಫೆ.04): ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜ್ ಪಕ್ಷವು ಸಂಪೂರ್ಣವಾಗಿ ನೆಲಕಚ್ಚಿದ ಬಳಿಕ ಉತ್ತರ ಪ್ರದೇಶದಲ್ಲಿ ಅಚ್ಚೇ ದಿನ್ ಬರಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಮದ್ಯ ವ್ಯವಹಾರದಲ್ಲಿ ಭಾರೀ ಅನ್ಯಾಯಗಳು ನಡೆಯುತ್ತಿವೆ. ಸಮಯ ಬಂದಾಗ ಇದು ಬಹಿರಂಗವಾಗಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಅಚ್ಚೇದಿನ್ ಬರಲಿದೆ. ಬಿಸೌಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಶಾಗ್ರ ಸಾಗರ್ ರವರಿಗೆ ಮತ ನೀಡಿ ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.
