ಬಸ್'ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸುತ್ತಿದ್ದು, ಬೆಳ್ತಂಗಡಿ ಆಸ್ಪತ್ರೆಗೆ ಸೇರಿಸಲಾಗುತ್ತದೆ.

ದಕ್ಷಿಣ ಕನ್ನಡ(ಮೇ.16): ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ಕೇರಳದ ಖಾಸಗಿ ಬಸ್​ ನಿಯಂತ್ರಣ ತಪ್ಪಿ‌ ಪ್ರಪಾತಕ್ಕೆ ಬಿದ್ದು ಮೂವರು ಮೃತಪಟ್ಟು,ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಾಟ್'ನ ಮೂರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪ್ರಪಾತಕ್ಕೆ ಉರುಳಿದೆ.

ಬಸ್'ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸುತ್ತಿದ್ದು, ಬೆಳ್ತಂಗಡಿ ಆಸ್ಪತ್ರೆಗೆ ಸೇರಿಸಲಾಗುತ್ತದೆ. ಚಾರ್ಮಾಡಿ ಘಾಟ್​ನ ಮೂರನೇ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.