ಹೊಸನಗರ ತಾಲ್ಲೂಕಿನ ಬ್ರಹ್ಮೇಶ್ವರದಿಂದ ಬೆಂಗಳೂರಿಗೆ ಹೊರಟ್ಟಿದ್ದ ಕಾರು ಶಿವಮೊಗ್ಗ ಸಮೀಪದ ಅಯನೂರು ಬಳಿ ಹೋಗುತ್ತಿದ್ದಾಗ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಆಯನೂರು(ಆ.28): ಮಹಿಂದ್ರಾ ಲಾರಿ ಮತ್ತು ಶಿಫ್ಟ್ ಕಾರಿನ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲ್ಲೂಕಿನ ಅಯನೂರು ಬಳಿ ನಡೆದಿದೆ.
ಮೃತರನ್ನು ನವೀನ, ಅಶೋಕ, ಕಿರಣ, ಸಂತೋಷ, ಕಾರ್ತಿಕ ಹಾಗೂ ಮಾರಿಮುತ್ತು ಮೃತರು. ಇವರೆಲ್ಲರೂ 25ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಗಾಯಗೊಂಡಿದ್ದ ಮತ್ತಿಬ್ಬರನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಅಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಹೊಸನಗರ ತಾಲ್ಲೂಕಿನ ಬ್ರಹ್ಮೇಶ್ವರದಿಂದ ಬೆಂಗಳೂರಿಗೆ ಹೊರಟ್ಟಿದ್ದ ಕಾರು ಶಿವಮೊಗ್ಗ ಸಮೀಪದ ಅಯನೂರು ಬಳಿ ಹೋಗುತ್ತಿದ್ದಾಗ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನ ಚಾಲಕ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಲು ಹೋದಾಗ ಅಪಘಾತ ಸಂಭವಿಸಿದೆ.
ಅಪಘಾತದಿಂದ ಶಿವಮೊಗ್ಗ - ಸಾಗರ ರಾಷ್ಟ್ರೀಯ ಹೆದ್ದಾರಿ ರಸ್ತೆ ಸಂಚಾರ ಕೆಲಕಾಲ ಅಸ್ತವ್ಯಸ್ತವಾಗಿತ್ತು. ಕುಂಸಿ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
