ಮೃತರು ಹಾಗೂ ಗಾಯಾಳುಗಳು ಗಣಪುರ ನಿವಾಸಿಗಳಾಗಿದ್ದು ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ಶಹಾಪುರಕ್ಕೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಯಾದಗಿರಿ(ಫೆ.20): ಎರಡು ಲಾರಿಗಳ ನಡುವೆ ಡಿಕ್ಕಿಯಾಗಿ 8 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಗಾಯಗೊಂಡಿರುವ ಘಟನೆ ಯಾದಗಿರಿ ತಾಲೂಕಿನ ರಾಮಸಮುದ್ರ ಬಳಿ ನಡೆದಿದೆ.ಮೃತರು ಹಾಗೂ ಗಾಯಾಳುಗಳು ಗಣಪುರ ನಿವಾಸಿಗಳಾಗಿದ್ದು ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ಶಹಾಪುರಕ್ಕೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.