ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದಾಗ  ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ವಾಹನ ಮರಕ್ಕೆ ಡಿಕ್ಕಿಯಾಗಿ 15 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಳಿಯಾರು ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಚಿತ್ರದುರ್ಗ(ಜ.3): ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದಾಗ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ವಾಹನ ಮರಕ್ಕೆ ಡಿಕ್ಕಿಯಾಗಿ 15 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಳಿಯಾರು ರಸ್ತೆಯಲ್ಲಿ ಈ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಪ್ರೌಢಶಾಲಾ ವಿದ್ಯಾರ್ಥಿಗಳು ಮಡಿಕೇರಿ ಪ್ರವಾಸ ಮುಗಿಸಿ ವಾಪಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದ್ದು, ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಚಿತ್ರದುರ್ಗ ಹಾಗೂ ದಾವಣಗೆರೆಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.