ಮುಂಬೈ-ಪುಣೆ ಹೈವೆಯಲ್ಲಿ ಸರಣಿ ಅಪಘಾತ: ಸಂಚಾರ ಅಸ್ತವ್ಯಸ್ತ

Accident in Mumbai-Pune Highway
Highlights

ಕನಿಷ್ಠ 6 ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಮುಂಬೈ-ಪುಣೆ ಎಕ್ಸಪ್ರೆಸ್ ಹೈವೆ ಸಂಪೂರ್ಣ ಬಂದ್ ಆಗಿರುವ ಘಟನೆ ನಡೆದಿದೆ. ಇಲ್ಲಿನ ಕಾಲಾಪುರ್ ಬಳಿ 6 ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸಪಡುತ್ತಿದ್ದಾರೆ.
 

ಪುಣೆ(ಮೇ.26): ಕನಿಷ್ಠ 6 ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಮುಂಬೈ-ಪುಣೆ ಎಕ್ಸಪ್ರೆಸ್ ಹೈವೆ ಸಂಪೂರ್ಣ ಬಂದ್ ಆಗಿರುವ ಘಟನೆ ನಡೆದಿದೆ. ಇಲ್ಲಿನ ಕಾಲಾಪುರ್ ಬಳಿ 6 ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸಪಡುತ್ತಿದ್ದಾರೆ.

ಕಾಲಾಪುರ್ ಟೋಲ್ ಪ್ಲಾಜಾ ಬಳಿ ಬೃಹತ್ ಟ್ರಕ್ ವೊಂದು ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಅದೃಷ್ಟವಶಾತ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದರೆ ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

ತಿಂಗಳ ಹಿಂದಷ್ಟೇ ಇದೇ ರಸ್ತೆಯಲ್ಲಿ ಮುಂಬೈಗೆ ಮದುವೆಗೆ ಹೊರಟಿದ್ದ ಕುಟುಂಬವೊಂದು ಕಾರು ಅಪಘಾತದಲ್ಲಿ ಮೃತಪಟ್ಟಿತ್ತು. ಹೈವೆಯಲ್ಲಿ ಅತೀ ವೇಗವಾಗಿ ವಾಹನ ಚಾಲನೆ ಮಾಡುವುದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

loader