ಇಸ್ಲಾಮಾಬಾದ್(ಅ.06): ಭಯೋತ್ಪಾದನೆಯನ್ನು ಮಟ್ಟಹಾಕಿ ಎಂದು ಪಾಕಿಸ್ತಾನದ ಮೇಲೆ ಜಾಗತಿಕವಾಗಿ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಧಾನಿ ನವಾಜ್ ಷರೀಫ್ ಸೇನೆಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಪಾಕಿಸ್ತಾನ ಸರ್ಕಾರವು ಉನ್ನತಾಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದ್ದು, ದೇಶಕ್ಕೆ ಕಪ್ಪುಚುಕ್ಕೆಯಾಗಿರುವ ಭಯೋತ್ಪಾದನೆಯನ್ನು ಮಟ್ಟಹಾಕಿ, ಇಲ್ಲದಿದ್ದರೆ ನಾವು ಜಾಗತಿಕವಾಗಿ ಮುಖಭಂಗ ಎದುರಿಸಬೇಕಾಗುತ್ತದೆ ಎಂದು ಸೇನೆಗೆ ಸೂಚಿಸಲಾಗಿದೆ ಎಂದು ಪಾಕಿಸ್ತಾನದ 'ಡಾನ್' ಪತ್ರಿಕೆ ವರದಿ ಮಾಡಿದೆ.

ಭಾರತದ ಮೇಲೆ 2008ರ ಮುಂಬೈ ದಾಳಿ, ಉರಿ ದಾಳಿಯ ನಂತರ ವ್ಯಾಪಕವಾಗಿ ಪಾಕ್ ಮೇಲೆ ಜಾಗತಿಕವಾಗಿ ಒತ್ತಡವೇರ್ಪಟ್ಟಿದೆ. ಭಯೋತ್ಪಾದನೆಯನ್ನು ಮಟ್ಟಹಾಕದಿದ್ದರೆ ವಿಶ್ವಸಮುದಾಯದಿಂದ ನಾವು ಬಹಿಷ್ಕರಿಸಲ್ಪಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಸರ್ತಾಜ್ ಏಜಾಜ್ ಚೌದರಿ ಎಚ್ಚರಿಕೆ ನೀಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.