ನಾವು ಕೇವಲ ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಗಿದ್ದೇವೆ. ಅಧಿಕೃತ ಕಸಾಯಿಖಾನೆಗಳು ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಸಿದ್ಧಾರ್ಥ ನಾಥ್ ಸಿಂಗ್ ಹೇಳಿದ್ದಾರೆ.

ಲಕ್ನೋ (ಮಾ.27): ಮಾಂಸ ವರ್ತಕರ ಪ್ರತಿಭಟನೆ ಕಾವು ಪಡೆಯುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರವು ಕೇವಲ ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆಯೆಂದು ಹೇಳಿದೆ.

ನಾವು ಕೇವಲ ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಗಿದ್ದೇವೆ. ಅಧಿಕೃತ ಕಸಾಯಿಖಾನೆಗಳು ನಿಯಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ಸಿದ್ಧಾರ್ಥ ನಾಥ್ ಸಿಂಗ್ ಹೇಳಿದ್ದಾರೆ.

ಯಾರು ಪರವಾನಿಗೆ ಪಡೆದಿದ್ದಾರೋ, ನಿಯಮಗಳನ್ನು ಪಾಲಿಸುತ್ತಿದ್ದಾರೋ, ಅವರು ಭಯಪಡಬೇಕಾಗಿಲ್ಲವೆಂದು ಹೇಳಿರುವ ಅವರು ಮೊಟ್ಟೆ, ಕೋಳಿ, ಅಥವಾ ಮೀನು ಅಂಗಡಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲವೆಂದು ಸ್ಪಷ್ಟೀಕರಿಸಿದ್ದಾರೆ.