ಬೆಂಗಳೂರು :  ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ನಟ ದರ್ಶನ್ ಕಾರು ಅಪಘಾತವಾಗಿದ್ದು ಈ ವೇಳೆ ದರ್ಶನ್ ಅವರು ಗಾಯಗೊಂಡಿದ್ದಾರೆ. ಇನ್ನು ಕಾರಿನಲ್ಲಿದ್ದ ನಟ ದೇವರಾಜ್ ಹಾಗೂ ಅವರ ಪುತ್ರ ಪ್ರಜ್ವಲ್ ದೇವರಾಜ್ ಅವರೂ ಕೂಡ ಗಾಯಗೊಂಡಿದ್ದಾರೆ. ತಡರಾತ್ರಿ ಖಾಸಗಿ ಹೋಟೆಲ್ ನಲ್ಲಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. 

ಸ್ವತಃ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದ ವೇಳೆ  ಕಾರು ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಸೇರಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಸಂಭವಿಸಿದ ಅಪಘಾತದಲ್ಲಿ ದರ್ಶನ್ ಹಾಗೂ ಪ್ರಜ್ವಲ್ ಗೆ ಹೆಚ್ಚಿನ ಗಾಯಗಳಾಗಿದ್ದು, ನಟ ದೇವರಾಜ್ ಕೈ ಬೆರಳಿಗೆ ಗಂಭೀರ ಗಾಯವಾಗಿದೆ. 

ಅಪಘಾತದ ಬಳಿಕ ದರ್ಶನ್ ಹಾಗೂ ಪ್ರಜ್ವಲ್ ದೇವರಾಜ್, ದೇವರಾಜ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.  ಅಪಘಾತದ ಸುದ್ದಿ ತಿಳಿಯುತ್ತಿದ್ದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ.