ಮೈಸೂರು, [ಸೆ.25]: ಕಾರ್ ಅಪಘಾತದಲ್ಲಿ ಗಾಯಗೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್  ಮೈಸೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಬೇಗ ಗುಣಮುಖರಾಗಲೆಂದು ರಾಜ್ಯಾದ್ಯಂತ ಅವರ ಅಭಿಮಾನಿಗಳು ಪೂಜೆ ಪುನಸ್ಕಾರಗಳನ್ನು ಮಾಡುತ್ತಿದ್ದಾರೆ.

ದರ್ಶನ್ ಕಾರ್ ಚಾಲನೆ ಮಾಡಿದ್ಯಾರು? ಸತ್ಯಾಸತ್ಯತೆ ಬಿಚ್ಚಿಟ್ಟ ಸಂದೇಶ್

ಅಷ್ಟೇ ಅಲ್ಲದೇ ಆಸ್ಪತ್ರೆಯಿಂದ ದರ್ಶನ್ ಅವರ ಡಿಸ್ಚಾರ್ಜ್ ಗಾಗಿ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನು ದರ್ಶನ್ ಅವರು ಯಾವಾಗ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನುವ ಬಗ್ಗೆ ನಟ ಸೃಜನ್ ಲೋಕೇಶ್ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೃಜನ್, ಇವತ್ತು ಪ್ರಜ್ವಲ್ ದೇವರಾಜ್ ಮತ್ತು ದೇವರಾಜ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ . ಇನ್ನು ದರ್ಶನ್ ಅವರಿಗೆ ಮೊದಲಿಗಿಂತ ನೋವು ಕಡಿಮೆಯಾಗಿದ್ದು, ನಾಳೆ [ಬುಧವಾರ] ಸಂಜೆ ವೇಳೆಗೆ ಡಿಸ್ಚಾರ್ಜ್ ಆಗುತ್ತಾರೆ ಎಂದು ತಿಳಿಸಿದ್ದಾರೆ.