ಬೆಂಗಳೂರು :  ಜಿಮ್ ಟ್ರೈನರ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 

ಪಾನಿಪೂರಿ ಕಿಟ್ಟಿ ಅಣ್ಣನ ಮಗನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಪಡಿಸಲಾಗಿದೆ. 

ಕೊಲೆ ಬೆದರಿಕೆಯಡಿ ದುನಿಯಾ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 365, 342, 325,506ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ವಸಂತನಗರದ ಅಂಬೇಡ್ಕರ್ ಭವನದಲ್ಲಿ ಬಾಡಿ ಬಿಲ್ಡಿಂಗ್ ಕಾಂಪಿಟೇಷನ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಹಳೆ ಧ್ವೇಷದ ಹಿನ್ನೆಲೆಯಲ್ಲಿ ಕಿಡ್ನಾಪ್ ಮಾಡಿ ಹಲ್ಲೆ ಮಾಡಲಾಗಿದೆ.