ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರೊಂದಿಗೆ ಮಂಗಳವಾರ ವಿಧಾನಸೌಧಕ್ಕೆ ಆಗಮಿಸಿದ ಶಿವರಾಜ್‌ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದರು.

ಬೆಂಗಳೂರು(ನ.08): ನಗರದ ಮಾನ್ಯತಾ ಟೆಕ್‌ಪಾರ್ಕ್ ಬಳಿಯ ತಮ್ಮ ನಿವಾಸದ ಹತ್ತಿರ ತೀವ್ರ ವಾಹನಗಳಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಶಾಶ್ವತ ಪರಿಹಾರವನ್ನು ಒದಗಿಸಬೇಕು ಎಂದು ‘ಹ್ಯಾಟ್ರಿಕ್ ಹೀರೋ’ ಶಿವರಾಜ್‌ಕುಮಾರ್ ಮಂಗಳವಾರ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿಯನ್ನು ಮಾಡಿದರು. ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರೊಂದಿಗೆ ಮಂಗಳವಾರ ವಿಧಾನಸೌಧಕ್ಕೆ ಆಗಮಿಸಿದ ಶಿವರಾಜ್‌ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಬಳಿಕ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ಮಾಡಿ ಸಂಚಾರದಟ್ಟಣೆ ಸಮಸ್ಯೆ ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ್ಯತಾ ಟೆಕ್‌ಪಾರ್ಕ್ ಬಳಿಯ ನಮ್ಮ ನಿವಾಸದ ಹತ್ತಿರ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳೊಂದಿಗೆ ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದೆವು. ಈ ವೇಳೆ ಒಂದು ರಸ್ತೆ ಸಂಚಾರ ನಿರ್ಬಂಧಿಸಿ ಸಮಸ್ಯೆ

ಬಗೆಹರಿಸಿದ್ದರು. ಆದರೂ ಸಮಸ್ಯೆ ಮುಂದುವರಿದಿದ್ದು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಚಿವರಿಗೆ ಮನವಿ ಮಾಡಲಾಗಿದೆ. ಸಾರ್ವಜನಿಕರಿಗೂ ಅನಾನುಕೂಲ ವಾಗಬಾರದು ಹಾಗೂ ನಮ್ಮ ವೈಯಕ್ತಿಕ ಜೀವನಕ್ಕೂ ಧಕ್ಕೆ ಉಂಟಾಗುತ್ತಿದೆ.