ಕಾರ್ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಮೈಸೂರು, [ಸೆ.25]: ಕಾರ್ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ದರ್ಶನ್ ಭೇಟಿ ನಂತರ ಪ್ರತಿಕ್ರಿಯಿಸಿದ ನಟ ಶಿವರಾಜ್ ಕುಮಾರ್, ದರ್ಶನ್ ಆರೋಗ್ಯವಾಗಿದ್ದಾರೆ. ಕೈಗೆ ಬಾಂಡೆಜ್ ಹಾಕಿರುವುದರಿಂದ ಕೆಳಗೆ ಬಂದು ಮಾತಾಡಲು ಆಗಿಲ್ಲ‌. ಇನ್ನೆರಡು ದಿನದಲ್ಲಿ ದರ್ಶನ್ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದರು.

ತಾಯಿ ಚಾಮುಂಡೇಶ್ವರಿ ಇರುವ ಜಾಗದಲ್ಲಿ ದರ್ಶನ್ ಗೆ ಏನ್ ಆಗುತ್ತೆ ಹೇಳಿ. ದೇವರಾಜ್ ಮತ್ತು ಪ್ರಜ್ವಲ್‌ರನ್ನ ಫೋನ್ ಮುಖಾಂತರ ಮಾತಾಡುತ್ತೇನೆ. ಅಭಿಮಾನಿಗಳು ಯಾರು ಆತಂಕಪಡುವ ಅವಶ್ಯಕತೆ ಇಲ್ಲ. ಅವರು ಕ್ಷೇಮವಾಗಿದ್ದಾರೆ, ದೇವರು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದರು.