ಮಾಧುರಿ ದೀಕ್ಷಿತ್ ಗೆ ಬಿಜೆಪಿ ಟಿಕೆಟ್

Actress Madhuri Dixit mights be gets Rajya Sabha offer
Highlights

2019 ರ ಲೋಕಸಭಾ ಚುನಾವಣೆ ವೇಳೆ ಮತ್ತೆ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯೋಜನೆ ಶುಭಾರಂಗವಾಗಿದೆ. 

ಮುಂಬೈ: 2019 ರ ಲೋಕಸಭಾ ಚುನಾವಣೆ ವೇಳೆ ಮತ್ತೆ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯೋಜನೆ ಶುಭಾರಂಗವಾಗಿದೆ. ಸಮರ್ಥನೆಗಾಗಿ ಸಂಪರ್ಕ ಅಭಿಯಾನದ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬುಧವಾರ ಸಂಜೆ ಅಮಿತ್ ಶಾ ಅವರು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ಮೋದಿ ಸರ್ಕಾರದ 4 ವರ್ಷಗಳ ಸಾಧನೆ ಬಗ್ಗೆ ಮನವರಿಕೆ ಮಾಡಿಕೊಟ್ಟರು. 

ಸುಮಾರು 2 ತಾಸುಗಳ ಕಾಲ ಉಭಯರು ಆಪ್ತ ಸಮಾಲೋಚನೆ ನಡೆಸಿದ್ದು, ಮಾತುಕತೆ ಫಲಪ್ರದವಾಗಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಭಯ ನಾಯಕರು ಇನ್ನೂ 2 - 3 ಬಾರಿ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ವಿಶೇಷವೆಂದರೆ ಬುಧವಾರ ಪ್ರಕಟವಾದ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ, 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿತ್ತು. ಇದಕ್ಕೂ ಮೊದಲು ಶಾ, ಉದ್ಯಮಿ ರತನ್ ಟಾಟಾ ಮತ್ತು ನಟಿ ಮಾಧುರಿ ದೀಕ್ಷಿತ್ ಅವರನ್ನು ಭೇಟಿಯಾಗಿ ಸರ್ಕಾರದ ಸಾಧನೆಯ ಮಾಹಿತಿ ನೀಡಿದರು. ಈ ವೇಳೆ ಅವರಿಗೆ ರಾಜ್ಯಸಭೆಯ ಟಿಕೆಟ್ ನೀಡುವ ಕುರಿತು ಶಾ ಆಫರ್ ನೀಡಿದರು ಎಂದು ಹೇಳಲಾಗಿದೆ. ಆದರೆ ಲತಾ ಮಂಗೇಶ್ಕರ್ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಅವರೊಂದಿಗೆ ಭೇಟಿ ಸಾಧ್ಯವಾಗಲಿಲ್ಲ.

loader