ಬೆಂಗಳೂರಿನ ಶಾಂತಿನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು ಈಗಾಗಲೇ ಹಲವು ಬಿಜೆಪಿ ಮುಖಂಡರನ್ನು ಭೇಟಿ ಮಾಡಿರುವ ಮಾತುಗಳು ಕೇಳಿಬರುತ್ತಿವೆ

ಚಿತ್ರನಟಿ, ನಿರ್ದೇಶಕಿ, ಬರಹಗಾರ್ತಿ ರೂಪ ಅಯ್ಯರ್ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಬೆಂಗಳೂರಿನ ಶಾಂತಿನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು ಈಗಾಗಲೇ ಹಲವು ಬಿಜೆಪಿ ಮುಖಂಡರನ್ನು ಭೇಟಿ ಮಾಡಿರುವ ಮಾತುಗಳು ಕೇಳಿಬರುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ಮಾಜಿ ಮೇಯರ್ ಕೆ. ವೆಂಕಟೇಶ್ ಮೂರ್ತಿ ಈ ಬಾರಿ ಸ್ಪರ್ಧಿಸುವುದು ಬಹುತೇಕ ಹೆಚ್ಚಿದೆ. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ 3ನೇ ಸ್ಥಾನ ಪಡೆದುಕೊಂಡಿದ್ದರು. ಪ್ರಸ್ತುತ ಶಾಂತಿನಗರವನ್ನು ಎನ್.ಎ.ಹ್ಯಾರಿಸ್ ಪ್ರತಿನಿಧಿಸುತ್ತಿದ್ದಾರೆ. 2ನೇ ಸ್ಥಾನವನ್ನು ಜೆಡಿಎಸ್'ನಿಂದ ಸ್ಪರ್ಧಿಸಿದ್ದ ಕೆ. ವಾಸುದೇವ್ ಮೂರ್ತಿ ಪಡೆದಿದ್ದರು.