ಮೀ ಟೂ ಅಭಿಯಾನದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ್ದ ನಟಿ ಶ್ರುತಿ ಹರಿಹರನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಯಾಕೆ? ಏನು? ಇಲ್ಲಿದೆ ಮಾಹಿತಿ. 

ಬೆಂಗಳೂರು, [ನ.13]: ಸ್ಯಾಂಡಲ್ ವುಡ್ ನಲ್ಲಿ ಮೀ ಟೂ ಬಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದು, ನಟ ಅರ್ಜುನ್ ಸರ್ಜಾ ಹಾಗೂ ನಟಿ ಶ್ರುತಿ ಹರಿಹರನ್ ನಡುವೆ ತಿಕ್ಕಾಟ ಮುಂದುವರೆದಿದೆ.

ಬೆಂಗಳೂರಿನ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ನಟಿ ಶ್ರುತಿ ಹರಿಹರನ್ ಮೆಟ್ಟಿಲೇರಿದ್ದಾರೆ. ನನ್ನ ಮೇಲೆ ದುರುದ್ದೇಶಪೂರಿತವಾಗಿ ಕೇಸ್ ದಾಖಲಾಗಿಸಲಾಗಿದೆ. 

ಸರ್ಜಾ ಕೇಸ್‌ : ಶ್ರುತಿಗೆ ಸಂಕಷ್ಟ

ಇದ್ರಿಂದ ನನ್ನ ಮೇಲಿನ ದೂರನ್ನ ರದ್ದು ಮಾಡುವಂತೆ ಶ್ರುತಿ ಹರಿಹರನ್ ಹೈಕೋರ್ಟ್ ಗೆ ಮನವಿ ಮಾಡಿದ್ದು, ನಾಳೆ ಅಂದರೆ ಬುಧವಾರ ಹೈಕೋರ್ಟ್ ನಲ್ಲಿ ವಿಚಾರಣೆ ಬರುವ ಸಾಧ್ಯತೆ ಇದೆ.

ನಟ ಅರ್ಜುನ್‌ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಶ್ರುತಿ ವಿರುದ್ಧವೇ ಪ್ರಶಾಂತ್​ ಸಂಬರಗಿ ಎಂಬುವರು ಸೈಬರ್‌ ಕ್ರೈಂ ಠಾಣೆಯಲ್ಲಿ ದಾಖಲಿಸಿದ್ದರು.