ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಸಿಎಂ ಪರ್ರಿಕ್ಕರ್ ಬರೋಬ್ಬರಿ 4 ತಿಂಗಳ ಬಳಿಕ ತಮ್ಮ ಕಚೇರಿಗೆ ಹಾಜರಾಗಿದ್ದಾರೆ.

ಪಣಜಿ[ಜ.02]: ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌, ಕಳೆದ ನಾಲ್ಕು ತಿಂಗಳಿನಲ್ಲಿಯೇ ಮೊದಲ ಬಾರಿಗೆ ವಿಧಾನಸೌಧದಲ್ಲಿರುವ ತಮ್ಮ ಕಚೇರಿಗೆ ಅಚ್ಚರಿ ರೀತಿಯಲ್ಲಿ ಹೊಸ ವರ್ಷದ ಮೊದಲ ದಿನವಾದ ಮಂಗಳವಾರ ಹಾಜರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳಗ್ಗೆ 10.45ಕ್ಕೆ ಕಚೇರಿಗೆ ಆಗಮಿಸಿ ಪರ್ರಿಕರ್‌ ಅವರನ್ನು ಬಿಜೆಪಿ ಶಾಸಕರು ಹಾಗೂ ಸಚಿವರು ಬರಮಾಡಿಕೊಂಡರು. ಈ ವೇಳೆ ಸಾವಿರಾರು ಕಾರ್ಯಕರ್ತರು ನೆರೆದಿದ್ದರು. ಸಿಬ್ಬಂದಿ ಇಲಾಖೆಯ ಅಧಿಕಾರಿಗಳ ಜೊತೆ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳು ಹಾಗೂ ಇತರ ವಿಷಯಗಳ ಬಗ್ಗೆ ಪರ್ರಿಕರ್‌ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

2018ರ ಅಗಸ್ಟ್‌ನಲ್ಲಿ ಕೊನೆಯ ಬಾರಿ ಅವರು ಕಚೇರಿಗೆ ಹಾಜರಾಗಿದ್ದರು.