ಕೆಂಪಯ್ಯ ಅವರು ಮುಂದುವರಿದಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು. ಮುಂದುವರಿದರೆ ಸೂಕ್ತಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬೆಂಗಳೂರು(ಮಾ.28): ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಗೃಹ ಸಚಿವರ ಸಲಹೆಗಾರ ಮಾಜಿ ಐಪಿಎಸ್ ಅಧಿಕಾರಿ ಕೆಂಪಯ್ಯ ಸೇರಿದಂತೆ ಯಾವುದೇ ಸಲಹೆಗಾರರು ಮುಂದುವರಿಯುವಂತಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ಸೇರಿದಂತೆ ಸಚಿವರಿಗೆ ನೇಮಕಗೊಂಡಿದ್ದ ರಾಜಕೀಯ ಹಾಗೂ ಇತರ ಸಲಹೆಗಾರರು ತಮ್ಮ ಹುದ್ದೆಗಳಲ್ಲಿ ಮುಂದುವರಿಯುವುವಂತಿಲ್ಲ.ಕೆಂಪಯ್ಯ ಅವರು ಮುಂದುವರಿದಿರುವ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು. ಮುಂದುವರಿದರೆ ಸೂಕ್ತಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ.12 ರಂದು ನಡೆಯಲಿದ್ದು, 15ರಂದು ಫಲಿತಾಂಶ ಪ್ರಕಟವಾಗಲಿದೆ. ನಿನ್ನೆಯಿದಲೇ ನೀತಿ ಸಂಹಿತೆ ಜಾರಿಗೊಂಡಿದೆ.