ಬೆಂಗಳೂರು[ಫೆ.24]  ಮುಂದಿನ ಸಾರಿಯೂ ಬೆಂಗಳೂರಿನಲ್ಲೇ ಏರ್ ಶೋ ನಡೆಸಲು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಏರೋ ಇಂಡಿಯಾ ಕುರಿತು ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನದದ ವಿಚಾರಗಳ  ಕುರಿತು ಪರಾಮರ್ಶೆ ನಡೆಸಲು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಎಂ. ಬಿ. ಪಾಟೀಲ್ ಭಾಗಿಯಾಗಿದ್ದರು. 

ಏರೀ ಇಂಡಿಯಾ ದುರಂತದಕ್ಕೆ ಕಾರಣವಾದ ಬೆಂಕಿ

ಬೆಂಗಳೂರಿನಿಂದ ಈ ಕಾರ್ಯಕ್ರಮ ಸ್ಥಳಾಂತರವಾಗುವ ಕುರಿತ ಮಾತು ಈ ಹಿಂದೆ ಕೇಳಿಬಂದಿತ್ತು. ಏರ್ ಶೋ ಸಂದರ್ಭದಲ್ಲಿ ನಡೆದ ಎರಡು ಅಹಿತಕರ ಘಟನೆಗಳ ಬಗ್ಗೆ ಸಭೆಯಲ್ಲಿ ವಿಷಾದ ವ್ಯಕ್ತವಾಯಿತು. ವಾಹನ ಕಳೆದುಕೊಂಡವರಿಗೆ ಎಲ್ಲ ನೆರವು ನೀಡುವ ಭರವಸೆ ನೀಡಲಾಯಿತು.