ಬೆಂಗಳೂರು: ಯಲಹಂಕದಲ್ಲಿ ನಡೆದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 300 ವಾಹನಗಳು ಸುಟ್ಟು ಕರಕಲಾಗಿರುವ ಹಿನ್ನೆಲೆಯಲ್ಲಿ ವಾಹನ ಮಾಲೀಕರು ವಾಹನದ ನೋಂದಣಿ ಹಾಗೂ ಚಾಲನಾ ಪರವಾನಗಿ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲು ಸಾರಿಗೆ ಇಲಾಖೆ ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಹಾಯ ಕೇಂದ್ರ ತೆರೆದಿದೆ.

 ಅಗ್ನಿ ಅವಘಡದಲ್ಲಿ ಹಾನಿಗೊಳಗಾಗಿರುವ ವಾಹನ ಮಾಲೀಕರು ಈ ಸಹಾಯ ಕೇಂದ್ರಕ್ಕೆ ಭೇಟಿ ನೀಡಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದು. 

ಹೊರರಾಜ್ಯದ ನೋಂದಣಿ ವಾಹನಗಳು ಹಾನಿಗೊಳಗಾಗಿದ್ದರೂ ಮಾಲೀಕರು ಈ ಸಹಾಯ ಕೇಂದ್ರದಲ್ಲಿ ಮಾಹಿತಿ ಪಡೆಯಬಹುದು. ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ 080  29729908, 29729909, ಮೊಬೈಲ್ ಸಂಖ್ಯೆ  9449864050 ಎಂದು ಸಾರಿಗೆ ಇಲಾಖೆ ಆಯುಕ್ತರು ತಿಳಿಸಿದ್ದಾರೆ.