ಮೊಬೈಲ್ ಸಂಖ್ಯೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್’ನಲ್ಲಿ ಪ್ರಶ್ನಿಸಿದ ಮಮತಾ ಬ್ಯಾನರ್ಜಿಗೆ ಮುಖಭಂಗವಾಗಿದೆ. ನೀವು ವೈಯಕ್ತಿಕವಾಗಿ ನ್ಯಾಯಾಲಯವನ್ನು ಸಂಪರ್ಕಿಸಿ. ರಾಜ್ಯದ ಪರವಾಗಿ ಪ್ರಶ್ನಿಸಬೇಡಿ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ಆದೇಶಕ್ಕೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.

ಕೊಲ್ಕತ್ತಾ (ಅ.30): ಮೊಬೈಲ್ ಸಂಖ್ಯೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್’ನಲ್ಲಿ ಪ್ರಶ್ನಿಸಿದ ಮಮತಾ ಬ್ಯಾನರ್ಜಿಗೆ ಮುಖಭಂಗವಾಗಿದೆ. ನೀವು ವೈಯಕ್ತಿಕವಾಗಿ ನ್ಯಾಯಾಲಯವನ್ನು ಸಂಪರ್ಕಿಸಿ. ರಾಜ್ಯದ ಪರವಾಗಿ ಪ್ರಶ್ನಿಸಬೇಡಿ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ಆದೇಶಕ್ಕೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಂಕೋರ್ಟ್ ನನ್ನ ಅರ್ಜಿಯನ್ನು ತಿರಸ್ಕರಿಸಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನವನ್ನು ನಾವು ಗೌರವಿಸುತ್ತೇವೆ. ನ್ಯಾಯಾಧೀಶರು ನೀಡಿರುವ ಸೂಚನೆಗೆ ವಿಧೇಯರಾಗಿದ್ದೇವೆ. ನಮಗೆ ಯಾವ ಸಮಸ್ಯೆಯೂ ಇಲ್ಲ. ನಾವಿದನ್ನು ಅಭಿನಂದಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ರಾಜ್ಯಸರ್ಕಾರ ಇಂತಹ ಅರ್ಜಿಯನ್ನು ಸಲ್ಲಿಸಲು ಹೇಗೆ ಸಾಧ್ಯ? ಸಂಯುಕ್ತ ವ್ಯವಸ್ಥೆಯಲ್ಲಿ ಒಂದು ರಾಜ್ಯ ಹೇಗೆ ಸಂಸತ್ತಿನ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಲೇರಲು ಸಾಧ್ಯವೆಂದು ನ್ಯಾ. ಎಕೆ ಸಿಕ್ರಿ ಅಂಡ್ ಅಶೋಕ್ ಭೂಷಣ್ ನೇತೃತ್ವದ ಪೀಠ ಪ್ರಶ್ನಿಸಿದೆ.