Asianet Suvarna News Asianet Suvarna News

ಶಬರಿಮಲೆ: ಪ್ರತಿಭಟನೆಯ ನಡುವೆಯೂ ಅಯ್ಯಪ್ಪ ದರ್ಶನಕ್ಕೆ ಮಹಿಳೆಯರ ದಂಡು

  • ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ ಬಳಿಕ ಇದೇ ಮೊದಲ ಬಾರಿಗೆ ದೇವಸ್ಥಾನದ ಬಾಗಿಲು ಬುಧವಾರ ಸಂಜೆ ತೆರೆಯಲಾಗುತ್ತಿದೆ.
  • ಒಂದೆಡೆ ಭಕ್ತ ಮಹಿಳೆಯರು ಭಾರಿ ಸಂಖ್ಯೆಯಲ್ಲಿ ಶಬರಿಮಲೆಯತ್ತ ಹೆಜ್ಜೆ ಹಾಕಿದ್ದಾರೆ, ಇನ್ನೊಂದೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿವೆ.
After SCs Historical Verdict  Finally Women Enter Sabarimala
Author
Bengaluru, First Published Oct 17, 2018, 1:41 PM IST

ತಿರುವನಂತಪುರಂ : ಕೇರಳದ ಅತ್ಯಂತ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಯಾವುದೇ ವಯಸ್ಸಿನ ಮಹಿಳೆಯರು ದರ್ಶನಕ್ಕೆ ತೆರಳಬಹುದು ಎಂದು ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ ಬಳಿಕ ಮೊದಲ ಬಾರಿಗೆ ದೇವಸ್ಥಾನದ ಬಾಗಿಲು ಬುಧವಾರ ಸಂಜೆ ತೆರೆಯುತ್ತಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ.

ಒಂದೆಡೆ ಭಕ್ತ ಮಹಿಳೆಯರು ಭಾರಿ ಸಂಖ್ಯೆಯಲ್ಲಿ ಶಬರಿಮಲೆಯತ್ತ ಹೆಜ್ಜೆ ಹಾಕಿದ್ದಾರೆ, ಇನ್ನೊಂದೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿವೆ.  ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿಗೊಳಿಸಲು ಕೇರಳ ಸರ್ಕಾರ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ದಾರಿಯುದ್ದಕ್ಕೂ ಪೊಲೀಸರ ಸರ್ಪಗಾವಲು ಇದೆ. ಕಪ್ಪು ಬಟ್ಟೆ ಧರಿಸಿದ ಭಕ್ತರಿಗಿಂತ ಖಾಕಿಯೇ ಎಲ್ಲೆಡೆ ಕಂಡುಬರುತ್ತಿದೆ. ಪೊಲಿಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರವುಗೊಳಿಸುತ್ತಿದೆ.

"

"

"

Follow Us:
Download App:
  • android
  • ios