Asianet Suvarna News Asianet Suvarna News

ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೆ ಲಕ್ಷ್ಮೀ ಅಸಮಾಧಾನ?

ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ನನ್ನನ್ನು ಕಾಲ ಕಸ ಎಂದು ಹೇಳಿದರೂ ಕೂಡ ನಾನು ಸುಮ್ಮನಿದ್ದೇನೆ ಎಂದು ಹೇಳಿದ್ದಾರೆ.

Again Lakshmi Hebbalkar UnHappy Over Ramesh Jarkiholi
Author
Bengaluru, First Published Oct 23, 2018, 10:05 AM IST
  • Facebook
  • Twitter
  • Whatsapp

ಬಾಗಲಕೋಟೆ: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಚಿವ ರಮೇಶ ಜಾರಕಿಹೊಳಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸುವಷ್ಟು ದೊಡ್ಡವಳು ನಾನಲ್ಲ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ರಮೇಶ್ ಜಾರಕಿಹೊಳಿ ಹೇಳಿಕೆ ಕುರಿತು ಏನೂ ಮಾತನಾಡುವುದಿಲ್ಲ. ಡಿ.ಕೆ.ಶಿವಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. 

ಅದರಲ್ಲಿ ನಾನೂ ಒಬ್ಬಳು ಎಂದು ತಿಳಿಸಿದರು. ಇನ್ನು ರಮೇಶ್ ಜಾರಕಿಹೊಳಿ ಪದೇ ಪದೆ ನನ್ನ ಹೆಸರು ಪ್ರಸ್ತಾಪಿಸುವುದು ಯಾಕೆಂದು ಗೊತ್ತಿಲ್ಲ. ಕಾಲ ಕಸ ಅಂದರು, ಸ್ಲಂನಿಂದ ಬಂದವರು ಅಂದರು. ಆದರೂ ನಾನು ಸುಮ್ಮನಿದ್ದೇನೆ ಎಂದು ಇದೇ ವೇಳೆ ಹೆಬ್ಬಾಳಕರ್ ತಿಳಿಸಿದರು. 

Follow Us:
Download App:
  • android
  • ios