4000 ಕಿಮೀವರೆಗೆ  ಪರಮಾಣು ಆಯುಧಗಳನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ ಅಗ್ನಿ-5 ಕ್ಷಿಪಣಿ ಪರೀಕ್ಷೆ ಇಲ್ಲಿನ ಅಬ್ದುಲ್ ಕಲಾಂ ದ್ವೀಪದಲ್ಲಿ ಯಶಸ್ವಿಯಾಗಿ ನೆರವೇರಿತು.

ಒಡಿಸ್ಸಾ (ಜ.02): 4000 ಕಿಮೀವರೆಗೆ ಪರಮಾಣು ಆಯುಧಗಳನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ ಅಗ್ನಿ-5 ಕ್ಷಿಪಣಿ ಪರೀಕ್ಷೆ ಇಲ್ಲಿನ ಅಬ್ದುಲ್ ಕಲಾಂ ದ್ವೀಪದಲ್ಲಿ ಯಶಸ್ವಿಯಾಗಿ ನೆರವೇರಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸಶಸ್ತ್ರಪಡೆಗೆ ಕ್ಷಿಪಣಿ ಬಳಸಲು, ವೇಗವನ್ನು ಪರೀಕ್ಷಿಸಲು ಇಂದು ಪರೀಕ್ಷೆ ಮಾಡಲಾಯಿತು. 20 ಮೀ ಅಷ್ಟು ಉದ್ದವಿದ್ದು 17 ಟನ್ ಭಾರವನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಈ ಕ್ಷಿಪಣಿ ಹೊಂದಿದೆ.

ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಓ) ಈ ಅಗ್ನಿ-5 ಕ್ಷಿಪಣಿಯನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ.