ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಭಾರತ ಭರ್ಜರಿ ಬಹುಮತಗಳಿಸಿ ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ಗೆಲುವು ಮುಂದಿನ ಮೂರು ರಾಜ್ಯಗಳ ಚುನಾವಣೆಗೆ ಬಿಜೆಪಿಗೆ ಮತ್ತಷ್ಟು ಶಕ್ತಿ ತುಂಬಿದೆ. 

ಮಹಾರಾಷ್ಟ್ರ, ಹರ್ಯಾಣ, ಜಾರ್ಖಂಡ್ ರಾಜ್ಯಗಳಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಅಮಿತ್ ಮೂರು ರಾಜ್ಯಗಳ ಕೋರ್ ಕಮಿಟಿ ಸಭೆ ಕರೆದಿದ್ದಾರೆ. 

ಮೂರು ರಾಜ್ಯಗಳ ಕೋರ್ ಕಮಿಟಿಗಳೊಂದಿಗೆ ಅಮಿತ್ ಮುಂದಿನ ಚುನಾವಣೆ ಸಂಬಂಧ ಹಾಗೂ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲು ಯಾವ ರೀತಿ ಕಾರ್ಯಪ್ರವೃತ್ತರಾಗಬೇಕು ಎನ್ನುವ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ. 

ಈ ವರ್ಷವೇ ಮೂರು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನ  ನಡೆಸಲಾಗುತ್ತಿದೆ. ಅಲ್ಲದೇ ಬಿಜೆಪಿ ಅಧಿಕಾರಕ್ಕೇರುವ  ಆತ್ಮವಿಶ್ವಾಸವನ್ನು ಲೋಕಸಭಾ ಚುನಾವಣೆ ನೀಡಿದೆ. 

ಆದರೆ ಯಾವುದೇ  ವಿಚಾರವನ್ನೂ ಕೂಡ ಹಗುರವಾಗಿ ತೆಗೆದುಕೊಳ್ಳಲು ಬಿಜೆಪಿ ಅಧ್ಯಕ್ಷರು ಸಿದ್ಧರಿಲ್ಲ ಎನ್ನುವ ಸಂದೇಶವನ್ನು ಸಭೆ ಕರೆಯುವ ಮೂಲಕ ಅಮಿತ್ ಶಾ ನೀಡಿದ್ದಾರೆ.