ಚೆನ್ನೈ : AIADMK ಸಂಸದ ಎಸ್ ರಾಜೇಂದ್ರನ್ ಕಾರು ಅಪಘಾತದಲ್ಲಿ ಮೃತರಾಗಿದ್ದಾರೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು ಮೂವರು ಗಮಭೀರವಾಗಿ ಗಾಯಗೊಂಡಿದ್ದಾರೆ. 

ತಮಿಳುನಾಡಿನ ವಿಲಿಪುರಮ್ ಜಿಲ್ಲೆಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.  

ತೈಲುಪರಂನಿಂದ ಪಾರ್ಟಿಯೊಂದನ್ನು ಮುಗಿಸಿಕೊಂಡು ತಮ್ಮ ನಿವಾಸಕ್ಕೆ ವಾಪಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ ನಿಟ್ಟಿನಲ್ಲಿ ಪಕ್ಷದಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡು ರಾಜೇಂದ್ರನ್ ಕಾರ್ಯನಿರ್ವಹಿಸುತ್ತಿದ್ದರು. 

ಸದ್ಯ ಈ ಅಪಘಾತದ ಬಗ್ಗೆ  ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.