ಜಯಲಲಿತಾ ಅವರಿಗೆ ಸಂತಾಪ ಸೂಚಿಸಿದ ನಂತರ ಎಐಎಡಿಎಂಕೆ  ಪಕ್ಷದ ಅಧ್ಯಕ್ಷ ಇ. ಮಧುಸೂಧನ್ ಹಾಗೂ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಮುಂತಾದ ನಾಯಕರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಚೆನ್ನೈ(ಡಿ.):ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಮುಖ್ಯಮಂತ್ರಿ ದಿವಗಂತ ಜಯಲಲಿತಾ ಆಪ್ತೆ ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪಕ್ಷದ ಪಕ್ಷದ ಸಾಮಾನ್ಯ ಸಭೆಯಲ್ಲಿ ಶಶಿಕಲಾ ಆಯ್ಕೆಯಾದ ಬಗ್ಗೆ ನಿರ್ಣಯವನ್ನು ಅಂಗೀಕರಿಸಲಾಯಿತು.

ಜಯಲಲಿತಾ ಅವರಿಗೆ ಸಂತಾಪ ಸೂಚಿಸಿದ ನಂತರ ಎಐಎಡಿಎಂಕೆ ಪಕ್ಷದ ಅಧ್ಯಕ್ಷ ಇ. ಮಧುಸೂಧನ್ ಹಾಗೂ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಮುಂತಾದ ನಾಯಕರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪಕ್ಷದ ನಂ 20 ರ ಹಾಗೂ ಸೆಕ್ಷನ್ 2 ನಿಯಮದ ಅನ್ವಯ ಶಶಿಕಲಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ'. ಈ ನಿರ್ಣಯದ ಪ್ರಕಾರ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರು ಪಕ್ಷದ ಎಲ್ಲ ಅಧಿಕಾರವನ್ನು ಹೊಂದಿರಲಿದ್ದಾರೆ' ಎಂದು ಸಭೆಯಲ್ಲಿ ನಿರ್ಣಯವನ್ನು ಓದಲಾಯಿತು.

ಜಯಲಲಿತಾ ಸಾವಿನ ನಂತರ ನಡೆದ ಮೊದಲ ಪಕ್ಷದ ಸಭೆ ಇದಾಗಿದೆ. ತಮಿಳುನಾಡಿನ ಎಲ್ಲ ಜಿಲ್ಲೆಯ ಪಕ್ಷದ ಅಧ್ಯಕ್ಷರು ಹಾಗೂ ಹಲವು ಸಂಘಟನೆಗಳು ಶಶಿಕಲಾ ಅವರನ್ನೇ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸ ಬೇಕೆಂದು ಒತ್ತಾಯಿಸಿದ್ದವು.

ಶಶಿಕಲಾ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಂಭವ ಹೆಚ್ಚಾಗಿದೆ.