Asianet Suvarna News Asianet Suvarna News

ಡಿಕೆಶಿಗಿಲ್ಲ ಕೆಪಿಸಿಸಿ ಭಾಗ್ಯ; ಪರಮೇಶ್ವರ್ ಅಧ್ಯಕ್ಷರಾಗಿ ಮುಂದುವರಿಕೆ; ಎಐಸಿಸಿ ಅಧಿಕೃತ ಪ್ರಕಟಣೆ

ದಿನೇಶ್ ಗುಂಡೂರಾವ್'ಗೆ ದಕ್ಷಿಣ ಕರ್ನಾಟಕದ ಉಸ್ತುವಾರಿ ವಹಿಸಿಕೊಡಲಾಗಿದೆ. ಎಸ್ಸಾರ್ ಪಾಟೀಲ್ ಅವರಿಗೆ ಉತ್ತರ ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳಲು ಸೂಚಿಸಲಾಗಿದೆ. ಇನ್ನು, ಸತೀಶ್ ಜಾರಕಿಹೊಳಿ ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ವರ್ಕಿಂಗ್ ಕಮಿಟಿ ವಿಶೇಷ ಆಹ್ವಾನಿತರಾಗಿ ಮಾಜಿ ಕೇಂದ್ರ ಸಚಿವ ಕೆಎಚ್ ಮುನಿಯಪ್ಪರನ್ನು ನೇಮಿಸಲಾಗಿದೆ.

aicc official declaration on kpcc

ಬೆಂಗಳೂರು(ಮೇ 31): ನಿರೀಕ್ಷೆಯಂತೆ ಜಿ.ಪರಮೇಶ್ವರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಕಮಿಟಿ ಅಧಿಕೃತವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪರಮೇಶ್ವರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರಿಸುತ್ತಿರುವುದಾಗಿ ತಿಳಿಸಿದೆ. ಅಷ್ಟೇ ಅಲ್ಲ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನವರೇ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಕಟಣೆ ಸ್ಪಷ್ಟಪಡಿಸಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಗಿಟ್ಟಿಸಲು ಪ್ರಬಲ ಪೈಪೋಟಿ ನಡೆಸಿದ್ದ ಡಿಕೆ ಶಿವಕುಮಾರ್ ಅವರನ್ನು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ವೇಳೆ, ಕೆಪಿಸಿಸಿಗೆ ಒಂದರ ಬದಲು ಎರಡು ಕಾರ್ಯಾಧ್ಯಕ್ಷ ಸ್ಥಾನಗಳನ್ನು ಸೃಷ್ಟಿಸಲಾಗಿದೆ. ದಿನೇಶ್ ಗುಂಡೂರಾವ್ ಜೊತೆ ಎಸ್.ಆರ್.ಪಾಟೀಲ್ ಅವರು ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ದಿನೇಶ್ ಗುಂಡೂರಾವ್'ಗೆ ದಕ್ಷಿಣ ಕರ್ನಾಟಕದ ಉಸ್ತುವಾರಿ ವಹಿಸಿಕೊಡಲಾಗಿದೆ. ಎಸ್ಸಾರ್ ಪಾಟೀಲ್ ಅವರಿಗೆ ಉತ್ತರ ಕರ್ನಾಟಕದ ಉಸ್ತುವಾರಿ ನೋಡಿಕೊಳ್ಳಲು ಸೂಚಿಸಲಾಗಿದೆ.

ಇನ್ನು, ಸತೀಶ್ ಜಾರಕಿಹೊಳಿ ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ವರ್ಕಿಂಗ್ ಕಮಿಟಿ ವಿಶೇಷ ಆಹ್ವಾನಿತರಾಗಿ ಮಾಜಿ ಕೇಂದ್ರ ಸಚಿವ ಕೆಎಚ್ ಮುನಿಯಪ್ಪರನ್ನು ನೇಮಿಸಲಾಗಿದೆ.

ಇದೇ ವೇಳೆ, ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಹುದ್ದೆಗಳನ್ನು ನಿರ್ವಹಿಸಬಾರದು ಎಂಬ ನಿಯಮದಂತೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಎಐಸಿಸಿ ಸೂಚಿಸಿದೆ. ಪರಮೇಶ್ವರ್'ರಿಂದ ತೆರವಾದ ಗೃಹ ಖಾತೆ ಯಾರ ಪಾಲಾಗುತ್ತೆ ಎಂಬ ಕುತೂಹಲ ಸೃಷ್ಟಿಯಾಗಿದೆ. ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಈ ಖಾತೆ ಹೆಚ್ಚುವಾಗಿ ನೀಡಲಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

Follow Us:
Download App:
  • android
  • ios