ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಈಗಾಗಲೇ ತಯಾರಿ ನಡೆಸಿದಂತಿದೆ. ಈ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸಲು ಇಂದು ಕಾಂಗ್ರೆಸ್ ನಾಯಕರ ದಂಡು ದೆಹಲಿಯಲ್ಲಿ ಬೀಡುಬಿಟ್ಟು, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದೆ.
ನವದೆಹಲಿ (ಅ.12): ವಿಧಾನಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಈಗಾಗಲೇ ತಯಾರಿ ನಡೆಸಿದಂತಿದೆ. ಈ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸಲು ಇಂದು ಕಾಂಗ್ರೆಸ್ ನಾಯಕರ ದಂಡು ದೆಹಲಿಯಲ್ಲಿ ಬೀಡುಬಿಟ್ಟು, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದೆ.
ರಾಜ್ಯ ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆ ಪಕ್ಷದ ತಯಾರಿ ಕುರಿತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಭೆ ಕರೆದಿದ್ದರು. ಸಭೆಯಲ್ಲಿ ಚನಾವಣಾ ರಣತಂತ್ರದ ಕುರಿತು ವಿಸ್ತೃತ ಚರ್ಚೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಹಲವು ಮುಖಂಡರು ಭಾಗವಹಿಸಿದ್ದರು. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಪರಿವರ್ತನಾ ಯಾತ್ರೆಗೆ ಪರ್ಯಾಯವಾಗಿ, ಸರ್ಕಾರದ ಸಾಧನೆ ಗಳನ್ನು ಜನರಿಗೆ ತಿಳಿಸುವುದ್ದಕ್ಕೋಸ್ಕರ ಮುಖ್ಯಮಂತ್ರಿ ನೇತೃತ್ವದಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಇನ್ನು, ಸಭೆ ಮುಗಿಸಿ ಹೊರಬಂದ ಪರಮೇಶ್ವರ್, ನನ್ನ ಮತ್ತು ಸಿದ್ಧರಾಮಯ್ಯ ನಡುವೆ ಯಾವುದೇ ವೈ ಮನಸ್ಸು ಇಲ್ಲ ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಈ ಮಧ್ಯೆ, ದೆಹಲಿಯಲ್ಲಿ ಕೇಂದ್ರ ಇಂಧನ ಸಚಿವ ಆರ್ ಕೆ ಸಿಂಗ ಮತ್ತು ರೈಲ್ವೆ ಸಚಿವ ಪಿಯುಶ ಗೋಯಲ್ ಅವರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿಗಳು ರಾಜ್ಯದ ಯೋಜನೆಗಳ ಬಗ್ಗೆ ಚರ್ಚಿಸಿದರು.
ಒಟ್ಟಿನಲ್ಲಿ, ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವಾಗಲೇ ಪಕ್ಷಗಳು ತಂತ್ರ-ಪ್ರತಿತಂತ್ರದ ತಯಾರಿಯಲ್ಲಿವೆ.
